ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲ್ಮೂಡ ಗ್ರಾಮದಲ್ಲಿ, ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಶವವನ್ನು ಪೆಟ್ರೋಲ್ ಹಾಕಿ ಸುಟ್ಟ ಘಟನೆ ನಡೆದಿದೆ.
ಮೃತ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ ಹಿರೇಮಠ ಎಂದು ಗುರುತಿಸಲಾಗಿದೆ.
ಜ್ಯೋತಿ ಹಿರೇಮಠ ಬೀದರ್ ಜಿಲ್ಲೆಯ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ವಾರಕ್ಕೆ ಒಂದು ದಿನ ಕಲಬುರಗಿಗೆ ಬಂದು ತಮ್ಮ ಕಾರ್ಯನಿರ್ವಹಣೆ ನಡೆಸುತ್ತಿದ್ದರು. ಕಲಬುರಗಿಯಿಂದ ಬೀದರ್ಗೆ ತೆರಳುವ ಮಾರ್ಗದಲ್ಲಿ ಕಮಲಾಪುರದ ಕಲ್ಮೂಡ ಗ್ರಾಮ ಬಳಿಯಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರನ್ನು ಹತ್ಯೆ ಮಾಡಿ ಶವವನ್ನು ಸುಟ್ಟಿದ್ದಾರೆ.
ಇದನ್ನೂ ಓದಿ:
ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಶವ ಪತ್ತೆಯ ಬಳಿಕ, ಮೃತರ ಗುರುತು ಕಲಬುರಗಿ ನಿವಾಸಿ ಎಂದು ದೃಢಪಟ್ಟಿದ್ದು, ಕುಟುಂಬದ ಸದಸ್ಯರನ್ನು ವಿಚಾರಣೆ ನಡೆಸಲಾಗುತ್ತಿದೆ.
ಸ್ಥಳೀಯರು ಘಟನೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ದುಷ್ಕರ್ಮಿಗಳನ್ನು ಹಿಡಿಯಲು ಕ್ರಮ ಕೈಗೊಂಡಿದ್ದಾರೆ.



