ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದಲ್ಲಿ ಗುರು ಶಂಕರಾಚಾರ್ಯ ಅವರ ಬೃಹತ್ ಪ್ರತಿಮೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.
108 ಅಡಿ ಇರುವ ಬೃಹತ್ ಪ್ರತಿಮೆಯನ್ನು ಸುಮಾರು ಎರಡು ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಿಸುವ ಯೋಜನೆ ತಯಾರಾಗಿದೆ.
ಈ ಬಗ್ಗೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಆಚಾರ್ಯ ಶಂಕರ ಸಾಂಸ್ಕೃತಿಕ ಏಕತಾ ನ್ಯಾಸ್ ಟ್ರಸ್ಟಿಗಳೊಂದಿಗೆ ಚರ್ಚಿಸಿದ್ದಾರೆ.
ಆದರೆ ಇದಕ್ಕೆ ವಿರೋಧ ಪಕ್ಷಗಳ ಅಡ್ಡಿಯಿದೆ. ರಾಜ್ಯ ತೀವ್ರ ಸಾಲದ ಸುಳಿಯಲ್ಲಿ ಸಿಲುಕಿರುವ ಈ ಸಮಯದಲ್ಲಿ ಈ ಯೋಜನೆ ಗಂಭೀರವಾಗಿ ಪರಿಗಣಿಸಬೇಕಿಲ್ಲ. ಬಜೆಟ್‌ನಲ್ಲಿ ಹಣ ಮೀಸಲಾದರೆ ನಂತರ ಚರ್ಚಿಸಬಹುದು ಎಂದು ಕಾಂಗ್ರೆಸ್ ಮುಖಂಡ ಕಮಲ್‌ನಾಥ್ ಹೇಳಿದ್ದಾರೆ.
ಏಕತೆಯ ಪ್ರತಿಮೆ ಶಂಕರಾಚಾರ್ಯರ 108 ಅಡಿ ಎತ್ತರದ ಮೂರ್ತಿಯನ್ನು 54 ಎತ್ತರದ ಕಟ್ಟೆಯ ಮೇಲೆ ಪ್ರತಿಷ್ಠಾಪಿಸಲಾಗುವುದು. ಮಾಂಧಾತ ಗುಡ್ಡದ ಮೇಲೆ ಪ್ರತಿಮೆ ಮತ್ತು 7.5 ಹೆಕ್ಟೇರ್ ಪ್ರದೇಶದಲ್ಲಿ ಶಂಕರ ಮ್ಯೂಸಿಯಂ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.