ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಬಸ್ಸಿಗೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಪ್ಪಿಕೇರಿ ಕ್ರಾಸ್ ಬಳಿ ನಡೆದಿದೆ.
ಔರಾದ್ ಘಟಕಕ್ಕೆ ಸೇರಿದ ಏಂ38 ಈ 1033 ನಂಬರ್‌ನ ಸರ್ಕಾರಿ ಬಸ್ ಬೀದರ್‌ನಿಂದ ಔರಾದ್‌ಗೆ ಹೋಗುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬಸ್‌ಗೆ ಬೆಂಕಿ ತಗುಲಿದೆ. ಪರಿಣಾಮ ಬಸ್ ಸುಟ್ಟು ಕರಕಲಾಗಿದೆ. ಬಸ್ಸಿಗೆ ಬೆಂಕಿ ತಗಲುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೂಡಲೇ ಕೆಳಗಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.