ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೈಕ್ ಟ್ಯಾಕ್ಸಿ ಸೇವೆ ಪುನರ್ ಸ್ಥಾಪನೆ ಬಗ್ಗೆ ಹೈಕೋರ್ಟ್ ಆದೇಶವನ್ನ ಸರ್ಕಾರ ಪಾಲನೆ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.
ಇದಕ್ಕೆ ಉತ್ತರಿಸಿದ ರಾಮಲಿಂಗಾ ರೆಡ್ಡಿ, 2018ರಲ್ಲಿ ಬೈಕ್ ಟ್ಯಾಕ್ಸಿ ಸಾಧಕಬಾಧಕದ ಬಗ್ಗೆ ಚರ್ಚೆ ಆಯಿತು. 2019ರಲ್ಲಿ ಬೈಕ್ ಟ್ಯಾಕ್ಸಿ ಯೋಜನೆ ಬೇಡ ಅಂತ ಮೆಟ್ರೋ ಎಂಡಿ ನೇತೃತ್ವದ ಸಮತಿ ವರದಿ ಕೊಟ್ಟಿದ್ದರು. ಆದರೂ 2021ರಲ್ಲಿ ಬ್ಯಾಟರಿ ವಾಹನಕ್ಕೆ ಅವಕಾಶ ಕೊಡಲಾಗಿತ್ತು. ಆದರೆ ಈಗ ಈ ಸೇವೆ ಕೊಡೋ ಕಂಪನಿಗಳು ನಿಯಮ ಉಲ್ಲಂಘನೆ ಮಾಡಲಾಗಿದೆ. ಅದಕ್ಕೆ ಸ್ಥಗಿತ ಮಾಡಲಾಗಿದೆ. ಬೈಕ್ ಟ್ಯಾಕ್ಸಿ ವಿಚಾರ ಕೋರ್ಟ್ನಲ್ಲಿ ಇದೆ. ಕೆಲವೇ ದಿನಗಳಲ್ಲಿ ತೀರ್ಪು ಬರುತ್ತದೆ. ಕೋರ್ಟ್ ಆದೇಶದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.