ಸರ್ಕಾರಗಳು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು: ಸಚಿವ ಡಾ. ಜಿ ಪರಮೇಶ್ವರ್

ಹೊಸ ದಿಗಂತ ವರದಿ, ತುಮಕೂರು:

ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ 14 ವರ್ಷದವರೆಗೆ ಕಡ್ಡಾಯವಾಗಿ ಗುಣಮಟ್ಟದ ಉಚಿತ ಶಿಕ್ಷಣ ನೀಡವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ ಆಗಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ತುಮಕೂರು ನಗರದ ಎಂಪ್ರೆಸ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಅಂಗವಾಗಿ ಪೂರಕ ಪೌಷ್ಠಿಕ ಆಹಾರ ವಿತರಣೆ ಮತ್ತು RBSK ತಪಾಸಣ ಕಾರ್ಯಕ್ರಮಗಳ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಗಳು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಪರಿಸರ ವಾತಾವರಣ ನಿರ್ಮಾಣ, ಸುಸಜ್ಜಿತವಾದ ಕೊಠಡಿ ಹಾಗೂ ಆಟದ ಮೈದಾನಗಳನ್ನು ಹೊಂದಿರಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆ ಮಾಡಬೇಕಾದರೆ ಅವರು ದೇಹವು ಸದೃಢವಾಗಿರಬೇಕು. ಗ್ರಾಮೀಣ ಭಾಗದ ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸಲು ನಮ್ಮ ಸರ್ಕಾರ ಬಾಳೆಹಣ್ಣು, ಮೊಟ್ಟೆ, ಚಿಕ್ಕಿ ವಿತರಣೆ ಮಾಡುವ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.

RBSK ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ 36 ಪ್ಯಾರಾಮೀಟರ್ ಗಳಲ್ಲಿ ಅವರ ಆರೋಗ್ಯ ತಪಾಸಣೆ ಮಾಡಲಾಗುವುದು. ಇದರಿಂದ ಅವರಲ್ಲಿರುವ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಮುಂದೆ ಸಂಭವಿಸಬಹುದಾದ ಸಮಸ್ಯೆಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು ಮಾತನಾಡಿ, ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಜೊತೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕೆಂದು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಜಿಬಿ ಜ್ಯೋತಿ ಗಣೇಶ್ ಅವರು, ಕೇಂದ್ರ ಸರ್ಕಾರವು ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಹಣವನ್ನು ಬರಿಸುತ್ತಿದೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಪೌಷ್ಠಿಕ ಆಹಾರವಾದ ಬಾಳೆಹಣ್ಣು, ಮೊಟ್ಟೆ, ಚಿಕ್ಕಿ ವಿತರಿಸುವ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ ಎಂದರು.

ಮಹಾನಗರ ಪಾಲಿಕೆ ಮಹಾಪೌರರಾದ ಪ್ರಭಾವತಿ ಸುಧಿಶ್ವರ್, ಶಾಸಕರುಗಳಾದ ಸುರೇಶ್ ಗೌಡ, ಜ್ಯೋತಿಗಣೇಶ್ ವೆಂಕಟೇಶ್ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಾಹಪೂರವಾಡ್, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ, ಶಾಲೆಯ ಮುಖ್ಯಶಿಕ್ಷಕ ಸೇರಿದಂತೆ SDMC ಸದಸ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!