August 10, 2026
Monday, August 10, 2026
spot_img

ಪರೀಕ್ಷಾ ಅಕ್ರಮ ಜಾಲಕ್ಕೆ ಸರ್ಕಾರದ ಸರ್ಜಿಕಲ್ ಸ್ಟ್ರೈಕ್: ಜೋಶಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ರೂಪಿಸಲಾದ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ–2026 ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ.

ಮಸೂದೆಗೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿಯೊಂದಿಗೆ ಸರ್ಕಾರ ಈ ಕಾನೂನು ಜಾರಿಗೆ ತರುತ್ತಿದೆ ಎಂದು ಹೇಳಿದರು.

ಪಾರದರ್ಶಕ ಪರೀಕ್ಷಾ ವ್ಯವಸ್ಥೆಗೆ ಒತ್ತು

ಮಸೂದೆಯಲ್ಲಿ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಶಿಕ್ಷೆ, ತ್ವರಿತ ನ್ಯಾಯಾಲಯಗಳ ಮೂಲಕ ವಿಚಾರಣೆ, ಬಲಿಷ್ಠ ತನಿಖಾ ವ್ಯವಸ್ಥೆ ಹಾಗೂ ವಂಚಕರ ವಿರುದ್ಧ ಕಠಿಣ ಕ್ರಮಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ನ್ಯಾಯಸಮ್ಮತ ಪ್ರಕ್ರಿಯೆ ಮತ್ತಷ್ಟು ಬಲವಾಗಲಿದೆ ಎಂದು ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ:

ಮಸೂದೆ ಚರ್ಚೆ ವೇಳೆ ರಾಜಕೀಯ ಗದ್ದಲ

ಮಸೂದೆ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಬಗ್ಗೆ ಆರೋಪ ಮಾಡಿದ್ದು, ಆಡಳಿತ ಪಕ್ಷ ಅದನ್ನು ತಳ್ಳಿಹಾಕಿತು. ಗದ್ದಲದ ನಡುವೆಯೇ ಮಸೂದೆ ಧ್ವನಿಮತದ ಮೂಲಕ ಅಂಗೀಕಾರಗೊಂಡಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !