ಹೊಸದಿಗಂತ ಡಿಜಿಟಲ್ ಡೆಸ್ಕ್:
9 ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿದ್ದು, ಇವರಲ್ಲಿ ಏಳು ಮಂದಿ ಹೊಸದಾಗಿ ನೇಮಕಗೊಂಡಿದ್ದಾರೆ. ಮೂವರನ್ನು ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಅಧ್ಯಕ್ಷೆ ದ್ರೌಪದಿ ಮುರ್ಮು ಶನಿವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.
ತೆಲಂಗಾಣದ ನೂತನ ರಾಜ್ಯಪಾಲರಾಗಿ ಜಿಷ್ಣುದೇವ್ ಶರ್ಮಾ(66) ಅವರನ್ನು ನೇಮಕ ಮಾಡಲಾಗಿದೆ. ಲೋಕಸಭೆ ಚುನಾವಣೆಗೂ ಮುನ್ನ ತಮಿಳಿಸೈ ಸೌಂದರ್ ರಾಜನ್ ರಾಜೀನಾಮೆ ನೀಡಿದ್ದು, ಅಂದಿನಿಂದ ಜಾರ್ಖಂಡ್ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ತೆಲಂಗಾಣದ ಉಸ್ತುವಾರಿ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಅವರನ್ನು ಮಹಾರಾಷ್ಟ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತೆಲಂಗಾಣದ ನೂತನ ರಾಜ್ಯಪಾಲರಾಗಿ ಜಿಷ್ಣು ದೇವ್ ವರ್ಮಾ ಅವರನ್ನು ನೇಮಕ ಮಾಡಿದೆ.
ತ್ರಿಪುರಾದ ಮಾಜಿ ಉಪಮುಖ್ಯಮಂತ್ರಿ ಜಿಷ್ಣುದೇವ್ ವರ್ಮಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ತ್ರಿಪುರಾ ರಾಜಮನೆತನಕ್ಕೆ ಸೇರಿದವರು. 1990ರಲ್ಲಿ ರಾಮಜನ್ಮಭೂಮಿ ಆಂದೋಲನದ ವೇಳೆ ಬಿಜೆಪಿ ಸೇರಿದರು.