ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿದೇಶ ಪ್ರವಾಸದ ಬಗ್ಗೆ ರಾಷ್ಟ್ರಪತಿಗೆ ಪತ್ರ ಬರೆದ ರಾಜ್ಯಪಾಲ ಆರೀಫ್‌ ಮೊಹಮದ್‌ ಖಾನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸಚಿವರ ವಿರುದ್ಧ ಅಧಿಕೃತ ವಿದೇಶ ಪ್ರವಾಸದ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ ಎಂದು ರಾಜಭವನದ ಮೂಲಗಳು ಹೇಳಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಸಿಎಂ ಮತ್ತು ಇತರ ಸಚಿವರ ಅಧಿಕೃತ ವಿದೇಶ ಪ್ರವಾಸದ ಬಗ್ಗೆ ರಾಜಭವನಕ್ಕೆ ಯಾವುದೇ ಸಂವಹನ ಮಾಡಿಲ್ಲ ಎಂದು ರಾಜ್ಯಪಾಲರು ಬರೆದ ಪತ್ರದಲ್ಲಿ ತಿಳಿಸಲಾಗಿದೆ. ಸಿಎಂ ಅನುಪಸ್ಥಿತಿಯಲ್ಲಿ ಅಧಿಕೃತ ಉಸ್ತುವಾರಿ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಅಕ್ಟೋಬರ್ 4 ರಿಂದ 14 ರವರೆಗೆ 10 ದಿನಗಳ ಕಾಲ ಸಿಎಂ ಪಿಣರಾಯಿ ವಿಜಯನ್ ಮತ್ತು ಇತರ ಸಚಿವರು ವಿದೇಶ ಪ್ರವಾಸದಲ್ಲಿದ್ದರು ಎನ್ನಲಾಗಿದೆ.

ಇದೇ ವೇಳೆ ಇಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಸಭೆ ನಡೆಯಲಿದ್ದು ಕೇರಳದ ಆಡಳಿತಾರೂಢ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಮಸ್ಯೆಗಳು ಪ್ರಮುಖ ಚರ್ಚೆಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯಪಾಲ ಖಾನ್ ಅವರು ಗುರುವಾರ ಸಿಎಂ ವಿಜಯನ್ ಅವರ ರಾಜಕೀಯ ಹಸ್ತಕ್ಷೇಪದ ಒಂದು ಉದಾಹರಣೆ ತೋರಿಸಲಿ, ಒಂದು ವೇಳೆ ಸಿಎಂ ಅಂತಹ ಉದಾಹರಣೆ ತೋರಿಸಿದರೆ ರಾಜೀನಾಮೆ ನೀಡಲು ಸಿದ್ಧ ಎಂದು ಎಂದು ಬಹಿರಂಗ ಸವಾಲು ಹಾಕಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!