ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹೈಡ್ರಾಮವೇ ನಡೆದಿದ್ದು, ಸುಮಾರು 15 ವರ್ಷಗಳ ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ.
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಎನ್. ರವಿ ಅವರು ಇಂದು ರಾಜ್ಯ ಸಚಿವ ಸಂಪುಟವನ್ನು ಅಧಿಕೃತವಾಗಿ ವಿಸರ್ಜಿಸಿದ್ದಾರೆ. ಈ ಮೂಲಕ ಇನ್ಮುಂದೆ ಮಮತಾ ಬ್ಯಾನರ್ಜಿ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ.
ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಈ ಬೆನ್ನಲ್ಲೇ ಸಂವಿಧಾನದ 174 (2) (ಬಿ) ವಿಧಿಯ ಅಡಿಯಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರು ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡು ಬಂಗಾಳ ರಾಜ್ಯ ಸರ್ಕಾರದ ಸಚಿವ ಸಂಪುಟವನ್ನು ವಜಾಗೊಳಿಸಿದ್ದಾರೆ.
ಈ ಕುರಿತು ರಾಜ್ಯಪಾಲರ ನಿರ್ದೇಶನದ ಮೇರೆಗೆ ಮುಖ್ಯ ಕಾರ್ಯದರ್ಶಿ ದುಷ್ಯಂತ್ ನರಿಯಾಲ ಆದೇಶ ಹೊರಡಿಸಿದ್ದು, ಮೇ 7 ರಿಂದ ರಾಜ್ಯ ವಿಧಾನಸಭೆ ವಿಸರ್ಜನೆಯಾಗಿದೆ ಎಂದು ತಿಳಿಸಿದ್ದಾರೆ.



