ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್

ಹೊಸದಿಗಂತ ವರದಿ ಮಂಗಳೂರು:
ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಗುರುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ರಾಜ್ಯಪಾಲರನ್ನು ಸ್ವಾಗತಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದಾಜ್ಲೆ, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವವಿ.ಸುನಿಲ್ ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ನಂತರ ರಾಜ್ಯಪಾಲರು ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!