ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತ ಕೋರಿದ್ದಾರೆ.
ಇವರ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರು, ನಾಯಕರು ಸ್ವಾಗತ ಕೋರಿದ್ದಾರೆ. ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬರಲಿದ್ದು, ಕೆಲವೇ ಸಮಯದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ.