Sunday, November 2, 2025

ರಾಜ್ಯಪಾಲ ಗೆಹ್ಲೋಟ್ ಗೆ ತೀವ್ರ ಜ್ವರ: ಆಸ್ಪತ್ರೆಗೆ ಭೇಟಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ವೈರಲ್ ಫೀವರ್​ ಹಿನ್ನೆಲೆ ಎರಡು ದಿನಗಳ ಹಿಂದೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.

ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಇತ್ತೀಚೆಗೆ ಮಧ್ಯಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಸರಣಿ ಕಾರ್ಯಕ್ರಮಗಳಲ್ಲಿ ಭಾಗಹಿಸಿದ್ದರು. ಹೀಗಾಗಿ ಆಯಾಸದಿಂದಾಗಿ ತೀವ್ರ ಜ್ವರ ಬಂದಿರಬಹುದು ಎನ್ನಲಾಗುತ್ತಿದೆ.

error: Content is protected !!