ಪದವಿ ಪೂರ್ವ ಶಿಕ್ಷಣ ಮಂಡಳಿ-ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವಿಲೀನ ವಿಧೇಯಕಕ್ಕೆ ರಾಜ್ಯಪಾಲ ಗೆಹ್ಲೋಟ್ ಅಂಕಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿತ್ತು. ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ.ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.

ಈ ಮೂಲಕ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!