Sunday, August 14, 2022

Latest Posts

ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದ ರಾಜ್ಯಪಾಲ ಗೆಹ್ಲೋಟ್

ಹೊಸದಿಗಂತ ವರದಿ, ಮಡಿಕೇರಿ:

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದರಲ್ಲದೆ, ಅಲ್ಲಿನ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.
ಬಳಿಕ ಅಲ್ಲಿನ ಯುದ್ಧ ಟ್ಯಾಂಕ್, ಯುದ್ಧ ವಿಮಾನ, ಯುದ್ಧ ಹಡಗು ವೀಕ್ಷಿಸಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಜನರಲ್ ತಿಮ್ಮಯ್ಯ ಅವರ ಬಾಲ್ಯದ ಜೀವನ, ವಿದ್ಯಾಭ್ಯಾಸ, ಸೇನಾ ಕ್ಷೇತ್ರದಲ್ಲಿನ ಸಾಧನೆ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಅವರು, ಜನರಲ್ ತಿಮ್ಮಯ್ಯ ಅವರು ಸಮರ್ಪಣಾ ಭಾವದಿಂದ ದೇಶ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಕೊಂಡಾಡಿದರು.


ಜನರಲ್ ತಿಮ್ಮಯ್ಯ ಅವರ ಬದುಕು, ಜೀವನವು ಯುವ ಜನತೆಗೆ ಪ್ರೇರಣಾದಾಯಕವಾಗಿದೆ. ದೇಶದ ಯುವ ಜನತೆ ಕೊಡಗಿಗೆ ಪ್ರವಾಸಕ್ಕೆ ಬಂದಾಗ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನಾ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss