ಹೊಸದಿಗಂತ ಡಿಜಿಟಲ್ ಡೆಸ್ಕ್
ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮುಖ್ಯ ಚಾಲಕ ರವಿಕುಮಾರ್ ಎಸ್. ಕಾಳೆ ಅವರು ಹೃದಯಘಾತದಿಂದ ಮೃತಪಟ್ಟಿದ್ದಾರೆ.
ನಿನ್ನೆ ಹುಬ್ಬಳ್ಳಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ರಾಜ್ಯಪಾಲರನ್ನು ಪಿಕ್ ಮಾಡಲು ತೆರಳಿದ್ದರು. ಈ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ದೇವನಹಳ್ಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು.
ಥಾವರ್‌ಚಂದ್ ಗೆಹ್ಲೋಟ್ ರಾಜ್ಯಕ್ಕೆ ರಾಜ್ಯಪಾಲರಾಗಿ ಬಂದಾಗಿನಿಂದ ರವಿಕುಮಾರ್ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ರಾಜಭವನದಲ್ಲಿ ರವಿಕುಮಾರ್ ಅವರ ಪಾರ್ಥಿವ ಶರೀರಕ್ಕೆ ರಾಜ್ಯಪಾಲರು ಪುಷ್ಪ ನಮನ ಸಲ್ಲಿಸಿದರು.