ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ. ಅವರದ್ದ ಸರ್ಕಾರವನ್ನು ಅಸ್ಥಿರಗೊಳಿಸುವ ಕ್ರಮ ಎಂಬುದಾಗಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಡಾ ಸೈಟ್​ ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ತನಿಖಾಸಂಸ್ಥೆಗೆ ದೂರು ನೀಡಲು ಅನುಮತಿ ಕೊಟ್ಟಿರುವ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರ ನಿರ್ಧಾರ ವಿರುದ್ಧ ಸಿಎಂ ಸಿದ್ದರಾಮಯ್ಯಮ್ ಮಾತನಾಡಿದ್ದು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ನನ್ನ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವುದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಟ್ಟ ಪಿತೂರಿಯಲ್ಲದೆ ಬೇರೇನೂ ಅಲ್ಲ. ಇದು ಪ್ರಜಾಪ್ರಭುತ್ವಕ್ಕೆ ನೇರ ಬೆದರಿಕೆ ಎಂಬುದಾಗಿ ಹೇಳಿದ್ದಾರೆ.

ರಾಜ್ಯಪಾಲರನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನನ್ನ ರಾಜೀನಾಮೆಗೆ ಒತ್ತಾಯಿಸಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ನಮ್ಮ ಯಶಸ್ಸನ್ನು ಬಿಜೆಪಿ ಸಹಿಸುವುದಿಲ್ಲ. ರಾಜ್ಯ ಕಾಂಗ್ರೆಸ್​ ಸಾಮಾನ್ಯ ಜನರಿಗೆ ಪ್ರಯೋಜನವಾಗುವ ಸರ್ಕಾರ ಮತ್ತು ಖಾತರಿ ಯೋಜನೆಗಳನ್ನು ನೀಡುತ್ತಿದೆ. ಈ ರಾಜಕೀಯ ದುರುದ್ದೇಶದ ವಿರುದ್ಧ ನಾವು ಬಲವಾಗಿ ಮತ್ತು ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ನನ್ನ ವಿರುದ್ಧ ಯಾವುದೇ ಪ್ರಕರಣಗಳಿಲ್ಲ ಮತ್ತು ರಾಜ್ಯಪಾಲರ ನಿರ್ಧಾರವು ಅಸಂವಿಧಾನಿಕವಾಗಿದೆ. ಈ ಕಾನೂನುಬಾಹಿರ ಅನುಮತಿಯನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ನನ್ನ ವಿರುದ್ಧ ದೂರು ದಾಖಲಾದ ದಿನದಿಂದಲೇ ಶೋಕಾಸ್ ನೋಟಿಸ್ ನೀಡಲಾಗಿದೆ. ರಾಜ್ಯಪಾಲರ ಈ ನಡೆಯನ್ನು ಮೊದಲೇ ನಿರೀಕ್ಷಿಸಲಾಗಿತ್ತು ಎಂಬುದಾಗಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!