Monday, October 2, 2023

Latest Posts

ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ರಾಜ್ಯಪಾಲರ ನೇತೃತ್ವದಲ್ಲಿ ಸಮಿತಿ ರಚನೆ: ಕೇಂದ್ರ ಗೃಹ ಸಚಿವಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಣಿಪುರದಲ್ಲಿ ಹಿಂಸಾಚಾರ ನಿಲ್ಲುವ ಲಕ್ಷಣ ಕಾಣದ ಹಿನ್ನೆಲೆ , ವಿವಿಧ ಜನಾಂಗಗಳ ನಡುವೆ ಶಾಂತಿ ಸ್ಥಾಪನೆ ಪ್ರಕ್ರಿಯೆ ಸುಲಭಗೊಳಿಸಲು ಮತ್ತು ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮಣಿಪುರ ರಾಜ್ಯಪಾಲರ ನೇತೃತ್ವದಲ್ಲಿ ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವಾಲಯ ಶನಿವಾರ ತಿಳಿಸಿದೆ.

ಮಣಿಪುರದ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ’ಶಾಂತಿ ಸಮಿತಿ’ಯನ್ನು ರಚಿಸಿದೆ. ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಕೆಲವು ಸಚಿವರು, ಸಂಸದರು, ಶಾಸಕರು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಮಿತಿಯ ಸದಸ್ಯರಾಗಿದ್ದಾರೆ ಎಂದು ಗೃಹ ಸಚಿವಾಲಯ ಪ್ರಕಟಣೆ ತಿಳಿಸಿದೆ.

ನಿವೃತ್ತ ಐಎಎಸ್ ಅಧಿಕಾರಿಗಳು, ಶಿಕ್ಷಣ ತಜ್ಞರು, ಸಾಹಿತಿಗಳು, ಕಲಾವಿದರು, ಸಾಮಾಜಿಕ ಕಾರ್ಯಕರ್ತರು ಮತ್ತು ವಿವಿಧ ಜನಾಂಗದ ಪ್ರತಿನಿಧಿಗಳನ್ನು ಸಹ ಈ ಸಮಿತಿ ಒಳಗೊಂಡಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೇ 29 ರಿಂದ ಜೂನ್ 1 ರವರೆಗೆ ಮಣಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಶಾಂತಿ ಸಮಿತಿ ರಚಿಸುವುದಾಗಿ ಘೋಷಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!