Monday, August 15, 2022

Latest Posts

ವರದಕ್ಷಿಣೆ ಪದ್ಧತಿ ವಿರುದ್ಧ ಸಾಮಾಜಿಕ ಜಾಗೃತಿ: ಕೇರಳದ ರಾಜ್ಯಪಾಲರಿಂದ ಉಪವಾಸ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವರದಕ್ಷಿಣೆ ಪಿಡುಗು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸಲುವ ಉದ್ದೇಶದಿಂದ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ತಿರುವನಂತಪುರದ ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನ ಉಪವಾಸ ನಡೆಸಿದರು.

ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಹಲವಾರು ಮಂದಿ ಮಹಿಳೆಯರು ತುತ್ತಾಗಿರುವ ಪ್ರಕರಣ ಖಂಡಿಸಿ ಮತ್ತು ಪಿಡುಗಿನ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬುಧವಾರ  ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ರಾಜ್ಯಪಾಲರು ಉಪವಾಸ ನಡೆಸಿದ್ದಾರೆ.

ಇದೇ ವೇಳೆ ಕೇರಳದಲ್ಲಿ ಗಾಂಧಿ ತತ್ವ ಅನುಸರಿಸುವ ಹಲವು ಸಂಘಟನೆಗಳ ಕಾರ್ಯಕರ್ತರು ಗಾಂಧಿ ಭವನದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಳಗ್ಗೆಯಿಂದಲೇ ಉಪವಾಸ ಕೈಗೊಂಡಿದ್ದರು.

ರಾಜ್ಯಪಾಲರ ಕ್ರಮಕ್ಕೆ ಬಿಜೆಪಿ ಮುಖಂಡ, ವಿದೇಶಾಂಗ ಖಾತೆ ಸಹಾಯಕ ಸಚಿವ ವಿ.ಮುರಳೀಧರನ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss