Thursday, March 30, 2023

Latest Posts

ಆರ್‌ಬಿಐ ಗರ್ವನರ್‌ ಶಕ್ತಿಕಾಂತ್‌ ದಾಸ್‌ ಗೆ ʼಗವರ್ನರ್‌ ಆಫ್‌ ದಿ ಇಯರ್‌ʼ ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸೆಂಟ್ರಲ್‌ ಬ್ಯಾಂಕಿನಿಂದ ಕೊಡಮಾಡುವ ಅಂತರಾಷ್ಟ್ರೀಯ ಪ್ರಶಸ್ತಿ ʼಗವರ್ನರ್‌ ಆಫ್‌ ದಿ ಇಯರ್‌ʼ ಗೆ ಭಾರತೀಯ ರಿಸರ್ವ್‌ ಬ್ಯಾಂಕಿನ ಗವರ್ನರ್‌ ಆಗಿ ಕಾರ್ಯನಿರ್ವಹಿಸುತ್ತಿರೋ ಶಕ್ತಿಕಾಂತ್‌ ದಾಸ್‌ ಆಯ್ಕೆಯಾಗಿದ್ದಾರೆ.

ಶ್ರೀ ದಾಸ್ ಅವರು ಡಿಸೆಂಬರ್ 2018 ರಿಂದ ಸೆಂಟ್ರಲ್ ಬ್ಯಾಂಕಿನ ಚುಕ್ಕಾಣಿ ಹಿಡಿದಿದ್ದಾರೆ. ಕೋವಿಡ್‌ ಸಾಂಕ್ರಾಮಿಕ, ಉಕ್ರೇನ್‌ನಲ್ಲಿನ ಯುದ್ಧದ ಕಾರಣದಿಂದಾಗಿ ತಲೆದೂರಿರುವ ಹಣದುಬ್ಬರ ಸೇರಿದಂತೆ ಅನೇಕ ಬಿಕ್ಕಟ್ಟುಗಳ ನಡುವೆ ಹಣಕಾಸು ಮಾರುಕಟ್ಟೆಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಕ್ಕಾಗಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.

ಗವರ್ನರ್‌ ಆಫ್‌ ದಿ ಇಯರ್‌ ಪ್ರಶಸ್ತಿಗೆ ಭಾಜನರಾದ ಶಕ್ತಿಕಾಂತ್‌ ದಾಸ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, “ದಾಸ್ ಅವರಿಗೆ ಪ್ರಶಸ್ತಿ ನೀಡಿರುವುದು ದೇಶಕ್ಕೆ ಅಪಾರ ಹೆಮ್ಮೆಯ ವಿಷಯವಾಗಿದೆ” ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!