ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಹಾಗೂ ರಾಜ್ಯ ಸರ್ಕಾರದ ಇತ್ತೀಚಿನ ನಡೆಗಳ ವಿರುದ್ಧ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಕಿಡಿಕಾರಿದರು.
ಬಳ್ಳಾರಿಯ ಘಟನೆಯನ್ನು ಖಂಡಿಸಿದ ರವಿಕುಮಾರ್, “ಕರ್ನಾಟಕವು ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗುತ್ತಿದೆ. ಈ ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು,” ಎಂದು ಒತ್ತಾಯಿಸಿದರು.
ಘಟನೆಯ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಯಾಗಬೇಕು. ಒಂದು ವೇಳೆ ಸಿಬಿಐಗೆ ನೀಡಲು ಸಾಧ್ಯವಾಗದಿದ್ದರೆ, ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

