ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯಪಾಲ ಗೆಹ್ಲೋಟ್ ಅವರು ವೈರಲ್ ಫೀವರ್ ನಿಂದ ಬಳಲುತ್ತಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿದ ವೈದ್ಯರು, ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.