ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ: ನಾಳೆಯಿಂದಲೇ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಲವಂತದ ಮತಾಂತರವನ್ನುತಡೆಯಲು ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಂಕಿತ ನೀಡಿದ್ದಾರೆ.

ಡಿಸೆಂಬರ್‌ ನಲ್ಲೇ ಈ ಕಾಯ್ದೆಯನ್ನು ತರಲು ರಾಜ್ಯ ಸರ್ಕಾರವು ಮುಂದಾಗಿತ್ತು. ಮತಾಂತರ ನಿಷೇಧ ಮಸೂದೆಯು ವಿಧಾನ ಸಭೆಯಲ್ಲಿ ಅಂಗೀಕಾರವಾದರೂ ವಿಧಾನ ಪರಿಷತ್‌ ನಲ್ಲಿ ಅಂಗೀಕಾರವಾಗಿರಲಿಲ್ಲ. ಆದ್ದರಿಂದ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಜಾರಿಗೆ ತರುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಈ ಸಂಬಂಧ ರಾಜ್ಯಪಾಲರ ಒಪ್ಪಿಗೆ ಪಡೆಯಲು ಮಸೂದೆಯನ್ನು ಕಳುಹಿಸಲಾಗಿತ್ತು.

ಪ್ರಸ್ತುತ ಕರ್ನಾಟಕದ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಈ ಮಸೂದೆಗೆ ಅಂಕಿತ ಹಾಕಿದ್ದು ನಾಳೆಯಿಂದಲೇ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರಲಿದೆ. ಈ ಕಾಯ್ದೆಯ ಪ್ರಕಾರ ಬಲವಂತವಾಗಿ ಮತಾಂತರ ಮಾಡುವವರಿಗೆ 10 ವರ್ಷಗಳ ಶಿಕ್ಷೆ ವಿಧಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!