ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲರ ವಜಾ: ಕೇರಳ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇರಳ ವಿಶ್ವವಿದ್ಯಾನಿಲಯಗಳ ಕುಲಪತಿ ಸ್ಥಾನದಿಂದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಜಾಗೊಳಿಸುವ ಮಸೂದೆಯನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ.
ಈ ಮಸೂದೆಯನ್ನು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲು ಈ ಹಿಂದೆ ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಇದೀಗ ಮಸೂದೆ ಅಂಗೀಕಾರವಾಗಿದೆ ಎಂದು ಸ್ಪೀಕರ್ ಎಎನ್ ಶಂಸೀರ್ ಹೇಳಿದರು.
ಕಾಂಗ್ರೆಸ್ ನೇತೃತ್ವದ ಯುಡಿಎಫ್, ಗವರ್ನರ್ ಅವರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕುವುದನ್ನು ವಿರೋಧಿಸುವುದಿಲ್ಲ, ಆದರೆ, ಅವರನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು ಮತ್ತು ಮಾಜಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ಆಯ್ಕೆ ಮಾಡಬೇಕು ಎಂದು ಚರ್ಚೆಯ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು.
ಕುಲಪತಿಗಳ ಆಯ್ಕೆಗಾಗಿ ಸಮಿತಿ ರಚಿಸಬೇಕಿದ್ದು, ಇದರಲ್ಲಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ, ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡಿರಬೇಕು ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!