April 3, 2026
Friday, April 3, 2026
spot_img

SSLC ತೃತೀಯ ಭಾಷೆ ವಿವಾದಕ್ಕೆ ರಾಜ್ಯಪಾಲರ ಎಂಟ್ರಿ: ನಿರ್ಧಾರ ಮರು ಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಕೇವಲ ಗ್ರೇಡ್ ನೀಡುವ ರಾಜ್ಯ ಸರ್ಕಾರದ ಹೊಸ ನಿಯಮ ಇದೀಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿದ್ದು, ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಸೂಚಿಸಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ.

ಇದನ್ನೂ ಓದಿ:

ಪತ್ರದಲ್ಲಿ, ತೃತೀಯ ಭಾಷೆ ವಿಷಯಕ್ಕೆ ಅಂಕಗಳ ಬದಲಾಗಿ ಕೇವಲ ಗ್ರೇಡ್ ನೀಡುವುದರಿಂದ ಆ ವಿಷಯದ ಶೈಕ್ಷಣಿಕ ಮಹತ್ವ ಕುಗ್ಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಭಾಷಾ ವಿಷಯವನ್ನು ಗಂಭೀರವಾಗಿ ಕಲಿಯುವ ಆಸಕ್ತಿ ಕಳೆದುಕೊಳ್ಳಬಹುದು ಎಂಬ ಅಭಿಪ್ರಾಯ ಶಿಕ್ಷಕರು ಮತ್ತು ಪೋಷಕರಿಂದ ವ್ಯಕ್ತವಾಗಿದೆ. ವಿಶೇಷವಾಗಿ ಭಾಷಾ ವೈವಿಧ್ಯತೆ ಮತ್ತು ಬೌದ್ಧಿಕ ಬೆಳವಣಿಗೆಯ ಮೇಲೆ ದೀರ್ಘಕಾಲೀನ ಪರಿಣಾಮ ಬೀರುವ ಸಾಧ್ಯತೆ ಕುರಿತು ಚಿಂತನೆ ವ್ಯಕ್ತವಾಗಿದೆ.

ಬೆಂಗಳೂರು ಮೂಲದ ‘ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ’ ಸಲ್ಲಿಸಿದ ಮನವಿಯ ಆಧಾರದ ಮೇಲೆ ರಾಜ್ಯಪಾಲರ ಕಚೇರಿ ಈ ಕ್ರಮ ಕೈಗೊಂಡಿದೆ. ಶಿಕ್ಷಣ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಸಮಗ್ರ ಸಮಾಲೋಚನೆ ನಡೆಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !