ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನೊಟೀಸ್: ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೊಟೀಸ್ ನೀಡಿದ್ದು, ಈ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ನೊಟೀಸ್ ನೀಡುವ ಮೂಲಕ ರಾಜಕೀಯವಾಗಿ ನಡೆದುಕೊಂಡಿದ್ದಾರೆ.ರಾಜ್ಯಪಾಲರ ಇಂತಹ ನಡೆ ಸರಿಯಲ್ಲ. ಜೈಲಿಗೆ ಹೋಗಬೇಕಾದವರು ಎಲಾ ಪಕ್ಷಗಳಲ್ಲಿಯೂ ಇದ್ದಾರೆ. ಆಡಳಿತ ಪಕ್ಷದಲ್ಲಿ ಮಾತ್ರವಲ್ಲ, ವಿಪಕ್ಷಗಳಲ್ಲಿಯೂ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಪಾಲರು ತಮ್ಮ ನಡೆಯನ್ನು ಇನ್ನೆರಡು ದಿನಗಳೊಳಗಾಗಿ ಬದಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಪಾಲರ ಕ್ರಮ ಖಂಡಿಸಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!