ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲ ಇಪ್ಪತ್ತೆರಡನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಒಟ್ಟು 6,81,217 ಮತಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 6,34,152 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 47,065 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಕಾರಜೋಳ ಗೆಲುವನ್ನು ಸಂಭ್ರಮಿಸಲು ಕಾರ್ಯಕರ್ತರು ಆಗಮಿಸಿದ್ದಾರೆ.