ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರ ಯೋಜನೆ (ನರೇಗಾ) ಅಡಿಯಲ್ಲಿ ಸಾಕಷ್ಟು ಕಾರ್ಮಿಕರು ಕೆಲಸ ಮಾಡುತ್ತಾರೆ, ಇವರ ಮಕ್ಕಳ ಲಾಲನೆ ಪೋಷಣೆಗಾಗಿ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದ್ದು, ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯಲು ಮುಂದಾಗಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಾಲ್ಕು ಸಾವಿರ ಶಿಶುವಿಹಾರ ತೆರೆಯಲು ಆಲೋಚಿಸುತ್ತುದ್ದು, ಮಕ್ಕಳಿಗೆ ಅನುಕೂಲವಾಗಲಿದೆ.
ಯೋಜನೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ, ಹಾಗಾಗಿ ಬಹುತೇಕ ಮಹಿಳೆಯರು ತಮ್ಮ ಮಕ್ಕಳೊಂದಿಗೆ ಕೆಲಸಕ್ಕೆ ಬರುತ್ತಾರೆ. ಮಕ್ಕಳ ಪೋಷಣೆಯೂ ಸರ್ಕಾರ ತಮ್ಮ ಹೊಣೆ ಎಂದು ಭಾವಿಸಿದ್ದು, ಮಕ್ಕಳನ್ನು ನೋಡಿಕೊಳ್ಳಲು ಉತ್ತಮ ವ್ಯವಸ್ಥೆ ಮಾಡಿದೆ.
ಶಿಶುವಿಹಾರದಲ್ಲಿ ಮಕ್ಕಳಿಗೆ ಉತ್ತಮ ಆಹಾರ, ಆಟ ಪಾಠಕ್ಕೆ ಅವಕಾಶವಿದೆ. ಆರು ವರ್ಷದ ನಂತರದ ಮಕ್ಕಳಾದರೆ ಅವರನ್ನು ಶಾಲೆಗೆ ಸೇರಿಸಲಾಗುತ್ತದೆ.