ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಮತ್ತು ಪ್ರೌಢಶಾಲೆ ಗಳಿಗೆ 10 ಸಾವಿರ ಸೇರಿ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ರಾಜ್ಯದಲ್ಲಿ ಸುಮಾರು 49,679 ಸರ್ಕಾರಿ ಶಾಲೆಗಳಲ್ಲಿ ಹಲವು ಹುದ್ದೆಗಳು ಬಹಳ ಸಮಯದಿಂದ ಖಾಲಿ ಇತ್ತು. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಹಲವಾರು ಪ್ರಶ್ನೆಗಳನ್ನು ಎದ್ದಿದ್ದವು. ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಿಂದ ಪ್ರಾರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಹುದ್ದೆ ಭರ್ತಿಗೆ ಅನುಮತಿ ನೀಡಿದೆ.
ಅತಿಥಿ ಉಪನ್ಯಾಸಕರ ನೇಮಕ ವಿಚಾರ ಪ್ರಕ್ರಿಯೆಯನ್ನು ವೇಗಗೊಳಿಸಲು ಶಾಲಾ ಮಟ್ಟದ ನೇಮಕಾತಿಗೆ ನೇಮಿಸಿಕೊಳ್ಳಲು ಶಿಕ್ಷಣ ಇಲಾಖೆಯು ಶಾಲೆಗಳ ಮುಖ್ಯ ಶಿಕ್ಷಕರನ್ನು ನಿಯೋಜಿಸಿದೆ.