ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇನ್ನು ಮುಂದೆ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಎಂದರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.
ರಾಜಕೀಯ ಮುಖಂಡರುಗಳು,ಸೆಲೆಬ್ರಿಟಿಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ. ಇದಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಶಾಲೆಗಳಲ್ಲಿ ಅಥವಾ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿನ ಮಕ್ಕಳ ಮನಸ್ಥಿತ ಬಗ್ಗೆ ಸರ್ಕಾರ ಆಲೋಚಿಸಿದೆ. ಅದ್ಧೂರಿ ಜನ್ಮದಿನ ಆಚರಣೆಯನ್ನು ಕಂಡ ಮಕ್ಕಳಿಗೆ ತಮ್ಮ ಹುಟ್ಟುಹಬ್ಬವನ್ನು ಹೀಗೆ ಆಚರಿಸಲು ಆಗುವುದಿಲ್ಲ ಎನ್ನುವ ಭಾವನೆ ಕಾಡುತ್ತದೆ. ಕೆಲವು ಮಕ್ಕಳಿಗೆ ಪೋಷಕರು ಇರುವುದಿಲ್ಲ ಅಂಥ ಮಕ್ಕಳಿಗೆ ಅನಾತ ಪ್ರಜ್ಞೆಯೂ ಕಾಡುತ್ತದೆ. ಈ ಎಲ್ಲ ಕಾರಣಗಳಿಂದ ಇನ್ನು ಸ್ಕೂಲ್‌ಗಳಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಬಂದ್ ಮಾಡಲಾಗಿದೆ.