Friday, February 3, 2023

Latest Posts

ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಮೇಕೆದಾಟು ಯೋಜನೆ ಸಾಕಾರಗೊಳಿಸಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಕೆದಾಟು ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದೇವೆ. ಈಗಲೂ ಅದನ್ನೇ ಮಾಡುತ್ತೇವೆ ಎಂದಿದ್ದಾರೆ. ಈಗ ಕೋವಿಡ್ ಮಹಾಮಾರಿ 3ನೇ ಅಲೆ ರಾಜ್ಯಕ್ಕೆ ಆವರಿಸಿದೆ, ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಹೀಗಿರುವಾಗ ರಾಜ್ಯ ಮತ್ತು ಬೆಂಗಳೂರಿನ ಜನರ ಆರೋಗ್ಯ ಕಾಪಾಡುವುದು ನಮ್ಮ ಪ್ರಥಮ ಕರ್ತವ್ಯವಾಗಿದೆ ಎಂದಿದ್ದಾರೆ.

ಈ ಕರ್ತವ್ಯ ನಿರ್ವಹಣೆಗೆ ಬದ್ಧತೆ ತೋರುವ ಅವಶ್ಯವಿದ್ದು, ಕೋವಿಡ್ ನಿಯಮಗಳನ್ನು ಉಲ್ಲಂಘಿಸದೇ ರೋಗ ನಿಯಂತ್ರಣಕ್ಕೆ ಸಹಕಾರ ಬಯಸುತ್ತೇನೆ. ಸಾಂಕ್ರಾಮಿಕವನ್ನು ರಾಜ್ಯದಿಂದ ದೂರ ಮಾಡಲು ಎಲ್ಲ ರೀತಿ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!