Thursday, August 18, 2022

Latest Posts

ಅರ್ಹ ಫಲಾನುಭವಿಗಳಿಗಷ್ಟೇ ಸರ್ಕಾರದ ಸೌಲಭ್ಯ: ಶಾಸಕ ಬೋಪಯ್ಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕಾರ್ಮಿಕ ಇಲಾಖೆ ಮೂಲಕ ಸರ್ಕಾರ ನೀಡುತ್ತಿರುವ ಲಾಕ್‌ಡೌನ್ ಪರಿಹಾರ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗಷ್ಟೇ ದೊರೆಯಬೇಕು, ಎಲ್ಲೂ ದುರುಪಯೋಗವಾಗಬಾರದು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ.
ಮೇಕೇರಿ ಶಾಲಾ ಆವರಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ನಡೆದ ಆಹಾರ ಧಾನ್ಯ ಮತ್ತು ಸುರಕ್ಷಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಮಡಿಕೇರಿ ತಾಲೂಕಿನ ಮೇಕೇರಿ, ಹಾಕತ್ತೂರು, ಕುಂದಚೇರಿ, ಭಾಗಮಂಡಲ, ಅಯ್ಯಂಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ನೋಂದಾಯಿತ ಕಟ್ಟಡ ಮತ್ತು ವಿವಿಧ ನಿರ್ಮಾಣ ಕಾರ್ಮಿಕರಿಗೆ, ಕಾರ್ಮಿಕ ಇಲಾಖಾ ವತಿಯಿಂದ ಆಹಾರ ಧಾನ್ಯ ಮತ್ತು ಸುರಕ್ಷಾ ಕಿಟ್ ಗಳನ್ನು ವಿತರಿಸಲಾಯಿತು. ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆದುಕೊಂಡರು.
ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷ ಪಿ.ಪಿ.ಸುಕುಮಾರ್, ಹಾಕತ್ತೂರು ಗ್ರಾ.ಪಂ ಅಧ್ಯಕ್ಷೆ ಸವಿತಾ ನವೀನ್, ಮೇಕೇರಿ ಗ್ರಾ.ಪಂ ಅಧ್ಯಕ್ಷ ದಿನೇಶ್, ಕಾರ್ಮಿಕ ಇಲಾಖೆ ಜಿಲ್ಲಾಧಿಕಾರಿ ಅನಿಲ್ ಬಿ.ಬಗಟಿ, ಹಿರಿಯ ನಿರೀಕ್ಷಕ ಎಂ.ಎಂ.ಯತ್ನಟ್ಟಿ ಮತ್ತಿತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!