ಚಲಿಸುತ್ತಿದ್ದ ರೈಲಿಗೆ ಸಿಲುಕಿ ಸರ್ಕಾರಿ ಆಸ್ಪತ್ರೆ ವೈದ್ಯ ಸಾವು, ಆತ್ಮಹತ್ಯೆ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಬಳಿ ರೈಲಿಗೆ ಸಿಲುಕಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಮೃತಪಟ್ಟಿದ್ದಾರೆ.

ಕಟ್ಟೆಹೊಳೆ ಗ್ರಾಮದ ಬಳಿ ಇರುವ ಸರಕಾರಿ ಆಸ್ಪತ್ರೆಯ ವೈದ್ಯ ಡಾ. ಉತ್ತಮ್ (27) ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಉತ್ತಮ್ ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು.

ಡಾ. ಉತ್ತಮ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಭದ್ರಾವತಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!