ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಪಿಎ ಸರಕಾರಕ್ಕಿಂತ ಹೆಚ್ಚಿನ ಅನುದಾನವನ್ನು ರಾಜ್ಯ ಸರಕಾರಕ್ಕೆ ನೀಡಿದ್ದೇವೆ. ಕಾಂಗ್ರೆಸ್ ನಾಯಕರು ಜನರಿಗೆ ಸುಳ್ಳು ಸುದ್ದಿ ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಕೋಲಾರದ ಐವರು ಕೈ ಶಾಸಕರ ರಾಜೀನಾಮೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಡಿಕೆಶಿ ಮತ್ತು ಇತರರ ನಡುವೆ ಕದನವಾಗಿದೆ. ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅನಗತ್ಯವಾಗಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ.
ಎನ್ಡಿಆರ್ಎಫ್ನ ಶೇಕಡಾ 75 ರಷ್ಟು ಕೇಂದ್ರ ಸರ್ಕಾರದಿಂದ ಒದಗಿಸಲಾಗಿದೆ. ಈ ಹಣವನ್ನು ವಿತರಿಸಿಲ್ಲ ಬದಲಿಗೆ ನ್ಯಾಯಾಲಯಕ್ಕೆ ಹೋದರು. ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು ಅನಿಸುತ್ತಿದೆ. ಇದನ್ನು ಜನತೆ ಮಾತ್ರವಲ್ಲದೆ ಪಕ್ಷದ ಶಾಸಕರಿಗೂ ಅನಿಸಿದೆ, ಮುಖ್ಯಮಂತ್ರಿ ಒಬ್ಬ ಅಶಕ್ತ ಮುಖ್ಯಮಂತ್ರಿ ಎಂದು ಟೀಕಿಸಿದರು.