ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ ಮನೆ ಮತ್ತು ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಇಂದು ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಆರು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು. ಈ ವೇಳೆ ಅವರು ಮೃತರ ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ ಮತ್ತು ಮನೆಯನ್ನೂ ಕಟ್ಟಿಸಿಕೊಡುತ್ತೇವೆ ಎಂದರು.
ಕವಾಡಿಗರಹಟ್ಟಿ ಬಡಾವಣೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ನೀಡುತ್ತೇವೆ. ಕವಾಡಿಗರಹಟ್ಟಿ ನಿವಾಸಿಗಳಿಗೆ 3 ಎಕರೆ ಜಮೀನಿನಲ್ಲಿ ವಸತಿ ವ್ಯವಸ್ಥೆ ನಿರ್ಮಿಸಲಾಗುವುದು. ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.