Tuesday, August 16, 2022

Latest Posts

ಐತಿಹಾಸಿಕ ಕ್ಷೇತ್ರ ಅಂಜನಾದ್ರಿ ಬೆಟ್ಟದ ಮೂಲ ಸೌಕರ್ಯ ಅಭಿವೃದ್ಧಿ: ಸರ್ಕಾರ ಚಿಂತನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊಪ್ಪಳದಲ್ಲಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪ್ರಥಮ ಹಂತದಲ್ಲಿ 50 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲು ತೀರ್ಮಾನಿಸಲಾಗಿದೆ.

ಇಂದು ಸಚಿವರುಗಳು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳದ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಅಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು ಎಂದು ನಿರ್ಧರಿಸಲಾಗಿದೆ.

ಸಚಿವರುಗಳಾದ ಸಿ.ಪಿ. ಯೋಗೇಶ್ವರ, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ಪಾಟೀಲ್, ಗಂಗಾವತಿ ಶಾಸಕ ದೊಡ್ಡನಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss