Friday, September 29, 2023

Latest Posts

ಮಣಿಪುರದ ಸ್ಥಿತಿಗತಿ ಕುರಿತು ಚರ್ಚೆಗೆ ಸರಕಾರ ಸಿದ್ಧ, ರಾಜಕೀಯ ಮಾಡಬೇಡಿ: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಣಿಪುರದ ಮಹಿಳೆಯರಿಬ್ಬರ ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದ್ದು, ಈ ಹೀನಾತಿ ಹೀನ ಕೃತ್ಯವನ್ನ ಯಾರೂ ಕ್ಷಮಿಸುವುದಕ್ಕೆ ಸಾಧ್ಯವಿಲ್ಲ. ಈ ನಡುವೆ ಈ ಕುರಿತು ರಾಜಕೀಯ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದ್ದು, ಲೋಕಸಭೆ ವಿಪಕ್ಷಗಳ ಗದ್ದಲ ಎಬ್ಬಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್(Anurag Thakur), ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಯಬೇಕು. ಇಂತಹ ಸೂಕ್ಷ್ಮ ವಿಷಯಗಳಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಮಣಿಪುರದಲ್ಲಿ ಸದ್ಯದ ಸ್ಥಿತಿಗತಿ ಕುರಿತು ಚರ್ಚೆ ನಡೆಸಲು ವಿಪಕ್ಷಗಳನ್ನು ಕೈ ಮುಗಿದು ಕೇಳಿಕೊಳ್ಳೇನೆ. ಪ್ರಕರಣವನ್ನು ರಾಜಕೀಯಗೊಳಿಸಬಾರದು. ರಾಜಸ್ಥಾನ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಮಣಿಪುರ ಸೇರಿದಂತೆ ಇತರೆ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಸದನಲ್ಲಿ ಧನಾತ್ಮಕ ಚರ್ಚೆ ನಡೆಯಬೇಕು. ಆದ್ರೆ, ಚರ್ಚೆಯಿಂದ ಯಾರೂ ಪಲಾಯನ ಮಾಡಬಾರದರು ಎಂದು ಕೈಗಿಮುಗಿದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.

ಇತ್ತ ಮಣಿಪುರದ ಪ್ರಕರಣದ ಕುರಿತು ಪ್ರತಿಪಕ್ಷಗಳ ಒಕ್ಕೂಟವು ಸೋಮವಾರ (ಜುಲೈ 24) ಸಂಸತ್ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಲು ತೀರ್ಮಾನಿಸಿವೆ.
ಪ್ರಧಾನಿ ಮೋದಿ ಮಣಿಪುರ ಘಟನೆ ಹೆಚ್ಚು ಬಗ್ಗೆ ಮಾತನಾಡದೇ ಇರುವುದಕ್ಕೆವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!