ಜನರ ಗಮನ ಬೇರೆಡೆಗೆ ಸೆಳೆಯಲು ಸರ್ಕಾರ ತಂತ್ರ: ರಾಹುಲ್ ಗಾಂಧಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಬೇಡ್ಕರ್ ವಿವಾದದಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ತಂತ್ರ ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದರು.

ಸಂಸತ್​ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಸಂಸತ್ತಿನ ಆವರಣದಲ್ಲಿ ಉಂಟಾದ ಘರ್ಷಣೆಯ ಕುರಿತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ಸಂಸತ್ತಿನಲ್ಲಿ ನಿರ್ಣಾಯಕ ವಿಷಯಗಳನ್ನು ಎತ್ತುವ ವಿರೋಧ ಪಕ್ಷದ ಪ್ರಯತ್ನಗಳಿಗೆ ಆಡಳಿತ ಪಕ್ಷದ ಸಂಸದರು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಆಡಳಿತ ಪಕ್ಷವು ಅಂಬೇಡ್ಕರ್ ವಿರೋಧಿ ಮತ್ತು ಸಂವಿಧಾನ ವಿರೋಧಿ ಸಿದ್ಧಾಂತಕ್ಕೆ ಬದ್ಧವಾಗಿದೆ . ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಭಾರತೀಯ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ ತತ್ವಗಳನ್ನು ಬಿಜೆಪಿ ದುರ್ಬಲಗೊಳಿಸುತ್ತಿದೆ ಎಂದು ಟೀಕಿಸಿದರು.

ಬಿಜೆಪಿಯ ಕ್ರಮಗಳು ಮತ್ತು ನೀತಿಗಳು ಮೂಲಭೂತವಾಗಿ ಅಂಬೇಡ್ಕರ್ ಪ್ರತಿಪಾದಿಸಿದ ಸಮಾನತೆ, ನ್ಯಾಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಅವರು ಟೀಕಿಸಿದರು.

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರನ್ನು ಒಳಗೊಂಡ ಪ್ರಕರಣದಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಸಂಸತ್ತಿನಲ್ಲಿ ಅಡ್ಡಿಪಡಿಸುತ್ತಿದೆ . ಈ ವಿಷಯದ ಕುರಿತು ಚರ್ಚೆಗಳನ್ನು ಹತ್ತಿಕ್ಕಲು ಮತ್ತು ಅನಗತ್ಯ ವಿವಾದವನ್ನು ಸೃಷ್ಟಿಸಲು ಬಿಜೆಪಿ ಉದ್ದೇಶಪೂರ್ವಕ ಪ್ರಯತ್ನಗಳನ್ನು ಮಾಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದರು.

ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೆವು: ಖರ್ಗೆ
ವಿರೋಧ ಪಕ್ಷದ ನಾಯಕರು ಸಂಸತ್ತಿಗೆ ಪ್ರವೇಶಿಸದಂತೆ ಬಿಜೆಪಿ ಸಂಸದರು ಪ್ರಯತ್ನಿಸಿದರು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೆವು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯ ಬಳಿ ಸಾಲಿನಲ್ಲಿ ನಡೆಯುತ್ತಿದ್ದೆವು. ಇದ್ದಕ್ಕಿದ್ದಂತೆ, ನಮ್ಮ ಪ್ರವೇಶವನ್ನು ತಡೆಯಲು ಬಿಜೆಪಿ ಸಂಸದರು ಮಕರ ದ್ವಾರದಲ್ಲಿ (ಮುಖ್ಯ ದ್ವಾರ) ಕುಳಿತುಕೊಂಡರು. ಅನೇಕ ಪುರುಷ ಸಂಸದರು ತಮ್ಮ ಬಲವನ್ನು ತೋರಿಸಲು ಪ್ರಯತ್ನಿಸುತ್ತಿದ್ದರು. ನಮ್ಮ ಮಹಿಳಾ ಸಂಸದರನ್ನು ಸಹ ಅವರು ನಿಲ್ಲಿಸಿದರು. ನಾನು ಯಾರನ್ನೂ ತಳ್ಳಲು ದೈಹಿಕವಾಗಿ ಸಮರ್ಥನಲ್ಲ. ಆದರೆ, ನನ್ನನ್ನು ತಳ್ಳಲಾಯಿತು. ಇದರಿಂದ ನಾನು ಬ್ಯಾಲೆನ್ಸ್​ ತಪ್ಪಿ ಕೆಳಗೆ ಕುಳಿತುಕೊಂಡೆ. ಆದರೂ ನಾವೇ ದೈಹಿಕ ಹಲ್ಲೆ ಮಾಡಿದ್ದೇವೆಂದು ನಮ್ಮ ಮೇಲೆ ಗಲಾಟೆ ನಡೆದಿದೆ ಎಂದು ಆರೋಪಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!