ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಡೆಂಗ್ಯೂ ಜ್ವರ ತಡೆಗೆ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
ಶೇಷಾದ್ರಿಪುರದಲ್ಲಿ ಕರ್ನಾಟಕ ಸ್ಮರಣಶಕ್ತಿ ಚಾಂಪಿಯನ್‌ಶಿಪ್ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸದ್ಯಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಯ ಹಗ್ಗಜಗ್ಗಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ರಾಜ್ಯದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿಲ್ಲ. ಈ ನಡುವೆ ಡೆಂಗ್ಯೂ ಜ್ವರ ಮತ್ತು ಝಿಕಾ ವೈರಸ್‌ಗಳು ಹೆಚ್ಚಾಗುತ್ತಿವೆ. ಡೆಂಗ್ಯೂ ನಿಯಂತ್ರಣಕ್ಕೆ ಸರಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದರು.