Friday, March 1, 2024

ಸರ್ಕಾರದ್ದು ಹಿಂದೂ ವಿರೋಧಿ ಧೋರಣೆ: ಕಾರವಾರದಲ್ಲಿ ಪ್ರತಿಭಟನೆ

ಹೊಸದಿಗಂತ ವರದಿ ಕಾರವಾರ:

ರಾಜ್ಯದಲ್ಲಿ ಶ್ರೀರಾಮ ಭಕ್ತರ ಮೇಲೆ ನಕಲಿ ಪ್ರಕರಣಗಳನ್ನು ದಾಖಲಿಸಿ ಹಿಂದೂ ವಿರೋಧಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ನಗರದ ಸುಭಾಷ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದುಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ ರಾಜ್ಯದಲ್ಲಿ ರಾಮ ಭಕ್ತರ ಮೇಲೆ ಪೊಲೀಸ್ ಇಲಾಖೆಯನ್ನು ಮುಂದಿಟ್ಟು ದೌರ್ಜನ್ಯ ಎಸಗುವ ಕೆಲಸ ಸರ್ಕಾರ ಮಾಡುತ್ತಿದ್ದು 30 ವರ್ಷಗಳಿಗೂ ಹಿಂದಿನ ಸುಳ್ಳು ಪ್ರಕರಣಕ್ಕೆ ಮತ್ತೆ ಜೀವ ನೀಡಿ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದೆ, ಹುಬ್ಬಳ್ಳಿಯಲ್ಲಿ ಬಂಧಿತ ಶ್ರೀಕಾಂತ ಪೂಜಾರಿ ಬಿಡುಗಡೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದರು.

ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ ಕಾಂಗ್ರೆಸ್ ಆಡಳಿತದಲ್ಲಿ ಸಾಧು ಸಂತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಸಾಮಾನ್ಯವಾಗಿದ್ದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಹೋರಾಟ ಮಾಡಿದವರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿರುವುದು ನಾಚಿಗೆಗೇಡು ಎಂದರು.

ಬಿಜೆಪಿ ವಕ್ತಾರ ನ್ಯಾಯವಾದಿ ನಾಗರಾಜ ನಾಯಕ ಮಾತನಾಡಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುವ ಮೂಲಕ ತಮ್ಮ ನಾಯಕರಾದ ಗಾಂಧೀ ಕುಟುಂಬವನ್ನು ಮೆಚ್ಚಿಸುವ ಕೆಲಸವನ್ನು ಮುಖ್ಯ ಮಂತ್ರಿ ಸಿದ್ಧರಾಮಯ್ಯ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ ಮಾತನಾಡಿದರು.
ಜಿಲ್ಲಾ ಬಿಜೆಪಿಯ ಪ್ರಮುಖರು, ವಿವಿಧ ಮಂಡಲಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!