ಕೆಲದಿನಗಳ ಕಾಲ ಜೈಲಲ್ಲಿ ಕೂಡಿಹಾಕಬೇಕೆನ್ನುವುದು ಸರ್ಕಾರದ ಉದ್ದೇಶ: ‘ಕೈ’ ವಿರುದ್ಧ HDK ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಸ್‌ಐಟಿ ತನಿಖೆ ಬಗ್ಗೆ ಮತ್ತೊಮ್ಮೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ರೇವಣ್ಣ ಬಂಧಿತನಾಗಿದ್ದು, ಮಹಿಳೆಯೊಬ್ಬರನ್ನು ಟ್ರೇಸ್ ಮಾಡಿ 5 ದಿನ ಕಳೆದರೂ ಯಾಕೆ ಇದುವರೆಗೆ ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ, ಹೇಳಿಕೆ ದಾಖಲಿಸಿಕೊಳ್ಳಲಿಲ್ಲ ಏಕೆ? ರೇವಣ್ಣ ಅವರನ್ನು ಇನ್ನೂ ಕೆಲವು ದಿನ ಜೈಲಿನಲ್ಲಿಡುವ ಉದ್ದೇಶ ಸರ್ಕಾರಕ್ಕಿದೆ ಎಂದು ಕುಮಾರಸ್ವಾಮಿ ಹೇಳಿದರು. ಅಪಹರಣದ ಸತ್ಯಾಂಶ ಹೊರಬರುವುದು ಸರ್ಕಾರಕ್ಕೆ ಇಷ್ಟವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!