Thursday, August 18, 2022

Latest Posts

ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ ಜಿಪಂ ಕಾರ್ಯನಿರ್ವಹಣಾಧಿಕಾರಿ: ಆಹಾರ ಧಾನ್ಯಗಳ ಸಂಗ್ರಹ ವ್ಯವಸ್ಥೆಯ ಪರಿಶೀಲನೆ

ಹೊಸದಿಗಂತ ವರದಿ, ಅಂಕೋಲಾ:

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗಾ ಎಂ ಅವರು ಅಮದಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿರುವ ವ್ಯವಸ್ಥೆಗಳನ್ನು ಪರೀಶಿಲಿಸಿದರು.
ಮಕ್ಕಳ ಕಲಿಕಾ ಚಟುವಟಿಕೆ, ಶಾಲೆಯಲ್ಲಿರುವ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು ಅಕ್ಷರ ದಾಸೋಹ ಕೊಠಡಿಗೆ ಭೇಟಿ ನೀಡಿ ಆಹಾರ ಧಾನ್ಯಗಳ ಸಂಗ್ರಹ ವ್ಯವಸ್ಥೆ ವೀಕ್ಷಿಸಿ ಆಹಾರ ಧಾನ್ಯಗಳ ಗುಣಮಟ್ಟದ ಪರೀಕ್ಷೆ ನಡೆಸಿದರು.
ಈ ಸಂದರ್ಭದಲ್ಲಿ ಮಕ್ಕಳ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಶಾಲೆಯ ಮುಖ್ಯ ಶಿಕ್ಷಕ ಮತ್ತು ಸಹ ಶಿಕ್ಷಕರೊಂದಿಗೆ ಚರ್ಚೆ ನಡೆಸಿದ ಅವರು ವಿದ್ಯಾರ್ಥಿಗಳ ಹಾಜರಾತಿ ಶೈಕ್ಷಣಿಕ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು.
ತರಗತಿಗಳಿಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿ ಪಠ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು.
ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ, ಅಮದಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!