ಟೋಲ್‌ ಸಂಗ್ರಹಕ್ಕೆ ಬರಲಿದೆ ಜಿಪಿಎಸ್‌ ಸಿಸ್ಟಮ್: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹ ವ್ಯವಸ್ಥೆಯನ್ನು ಬದಲಿಸಲು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ನಿತಿನ್‌ ಗಡ್ಕರಿ (Nitin Gadkari) ಅವರು ತೀರ್ಮಾನಿಸಿದ್ದಾರೆ.

ಟೋಲ್‌ ಗೇಟ್‌ಗಳ ಬದಲಿಗೆ ಜಿಪಿಎಸ್‌, ಸ್ಯಾಟಲೈಟ್‌ ಆಧಾರಿತ ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂ (GNSS) ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ. ಇದರಿಂದ ಜನರಿಗೆ ಸಮಯ ಉಳಿತಾಯವಾಗುವ ಜತೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) 10 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯ ಲಭಿಸಲಿದೆ ಎಂದು ನಿತಿನ್‌ ಗಡ್ಕರಿ ಹೇಳಿದ್ದಾರೆ.

ಜಿಎನ್‌ಎಸ್‌ಎಸ್‌ ತಂತ್ರಜ್ಞಾನದ ಅಳವಡಿಕೆಯಿಂದ 10 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯದ ಜತೆಗೆ ವ್ಯವಸ್ಥೆಯಲ್ಲಿರುವ ಶೇ.99ರಷ್ಟು ಲೋಪದೋಷಗಳನ್ನು ಕೂಡ ತೆಗೆಯಬಹುದಾಗಿದೆ. ಯಾವುದೇ ಲೋಪಗಳು ಇಲ್ಲದ, ಪಾರದರ್ಶಕ ವ್ಯವಸ್ಥೆಯಿಂದ ಕೂಡಿದ ಜಿಎನ್‌ಎಸ್‌ಎಸ್‌ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಆದಾಯದ ಜತೆಗೆ ಜನರಿಗೆ ಉತ್ತಮ ಸೇವೆ ಒದಗಿಸಲಾಗುವುದು ಎಂದು ನಿತಿನ್‌ ಗಡ್ಕರಿ ನೀಡಿದ್ದಾರೆ.

ಏನಿದು ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆ?
ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆ ಜಾರಿಗೆ ಬಂದರೆ, ವಾಹನಗಳಿಗೆ ಜಿಪಿಎಸ್‌ ಯಂತ್ರಗಳನ್ನು ಅಳವಡಿಸಲಾಗುತ್ತದೆ. ಜಿಪಿಎಸ್‌ ಯಂತ್ರವು ಉಪಗ್ರಹದೊಂದಿಗೆ ಸಂಪರ್ಕ ಹೊಂದಿರುತ್ತದೆ. ಇದರಿಂದಾಗಿ ನಮ್ಮ ವಾಹನವು ಯಾವ ಟೋಲ್‌ ರಸ್ತೆಗೆ ಪ್ರವೇಶ ಪಡೆದಿದೆ, ಯಾವ ರಸ್ತೆಯಿಂದ ನಿರ್ಗಮಿಸಿದೆ ಎಂಬುದನ್ನು ಲೆಕ್ಕ ಹಾಕಿ, ಬ್ಯಾಂಕ್‌ ಖಾತೆಯಿಂದ ಟೋಲ್‌ ಕಡಿತಗೊಳಿಸುತ್ತದೆ.ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯು ಜಾರಿಗೆ ಬಂದರೆ, ಭಾರತದಲ್ಲಿ ಸಮಯದ ಜತೆಗೆ ಹಣವನ್ನೂ ಉಳಿತಾಯ ಮಾಡಬಹುದಾಗಿದೆ. ಟೋಲ್‌ ಸಂಗ್ರಹ ಇರುವ ಹೆದ್ದಾರಿಯಲ್ಲಿ ನಾವು ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಟೋಲ್‌ ಶುಲ್ಕ ಪಾವತಿಸುತ್ತೇವೆ. ಟೋಲ್‌ ಗೇಟ್‌ ನಂತರ ಅರ್ಧ ಕಿಲೋಮೀಟರ್‌ ಇದ್ದರೂ, ಪೂರ್ತಿ ಹಣವನ್ನು ನಾವೀಗ ಪಾವತಿಸಬೇಕು. ಆದರೆ, ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೆ ಬಂದರೆ, ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಹಣ ಪಾವತಿಸುತ್ತೇವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!