ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯ ಸ್ತನಗಳನ್ನು ಹಿಡಿದುಕೊಳ್ಳುವುದು, ಪ್ಯಾಂಟ್ ನ ದಾರವನ್ನು ತುಂಡು ಮಾಡುವುದು ಮತ್ತು ಆಕೆಯನ್ನು ಎಳೆದೊಯ್ಯಲು ಪ್ರಯತ್ನ ಮಾಡುವುದು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಯತ್ನದ ಅಪರಾಧ ಆಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಪ್ರಕರಣವೊಂದರಲ್ಲಿ ಸಮನ್ಸ್ ಆದೇಶವನ್ನು ಮಾರ್ಪಾಡು ಮಾಡಿದ ಅಲಹಾಬಾದ್ ಹೈಕೋರ್ಟ್, ಐಪಿಸಿ ಸೆಕ್ಷನ್ 354-ಬಿ (ಬಟ್ಟೆ ಬಿಚ್ಚಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ), ಪೋಕ್ಸೋ ಕಾಯ್ದೆಯ ಸೆಕ್ಷನ್ 9, 10ರ (ತೀವ್ರ ಸ್ವರೂಪದ ಲೈಂಗಿಕ ಹಲ್ಲೆ) ಅಡಿ ಆರೋಪಿಗಳನ್ನು ವಿಚಾರಣೆಗೆ ಗುರಿಪಡಿಸಬೇಕು ಎಂಬ ಆದೇಶ ನೀಡಿದೆ.
ಆರೋಪಿಗಳಾದ ಪವನ್ ಮತ್ತು ಅಕಾಶ್ ಸಂತ್ರಸ್ತೆಯ ಸ್ತನಗಳನ್ನು ಹಿಡಿದು, ಕೆಳವಸ್ತ್ರವನ್ನು ತೆಗೆಯಲು ಪ್ಯಾಂಟ್ ನ ದಾರವನ್ನು ತುಂಡು ಮಾಡಿ, ಆಕೆಯನ್ನು ಎಳೆದುಕೊಂಡು ಹೋಗಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.
ಆರೋಪಿಗಳು ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗುವ ತೀರ್ಮಾನ ಮಾಡಿದ್ದರು ಎಂಬುದನ್ನು ಸೂಚಿಸುವ ಯಾವುದೇ ಅಂಶಗಳು ಈ ಪ್ರಕರಣದಲ್ಲಿ ಇಲ್ಲ ಎಂದು ಹೈಕೋರ್ಟ್ ಹೇಳಿದೆ.