ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ 1 ರಿಂದ 9 ನೇ ತರಗತಿ ಪರೀಕ್ಷೆ ನಡೆಸುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇನ್ನೆರಡು ದಿನದಲ್ಲಿ ಶಿಕ್ಷಣ ಇಲಾಖೆ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಸಂಬಂಧಪಟ್ಟವರನ್ನ ಕರೆದು ಚರ್ಚಿಸಿದ್ದೇವೆ. ಅವರೆಲ್ಲರ ಅಭಿಪ್ರಾಯ ಸ್ವೀಕರಿಸಿ, ನಾವು ಒಂದು ಹಂತಕ್ಕೆ ಬಂದಿದ್ದೇವೆ. ಇನ್ನೆರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಇನ್ನೆರಡು ದಿನದಲ್ಲಿ ಶಿಕ್ಷಣ ಇಲಾಖೆ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಿದರು.