ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸಹಿತ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ನೀಡಲು ಸರಕಾರ ಮುಂದಾಗಿದ್ದು, ಈ ಪ್ರಸ್ತಾಪ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಬೆಂಗಳೂರಿನ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್ ಎಂಬವರು ತಮ್ಮ ಅರ್ಜಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭ ರಾಜ್ಯ ಸರಕಾರ ಇಂತಹ ನಿರ್ಧಾರ ತೆಗೆದುಗೊಂಡಿದೆ. ಇದರಿಂದ ವಿದ್ಯಾರ್ಥಿಗಳು ಸಹಿತ ಪೋಷಕರು ಗೊಂದಲಕ್ಕೆ ಒಳಗಾಗಿದ್ದಾರೆ. ಸಚಿವರ ಈ ನಿರ್ಧಾರ ಸಂವಿಧಾನದ ಪರಿಚ್ಛೇದ 14ರಡಿ ಸಮಾನತೆ ಹಕ್ಕನ್ನು ಉಲ್ಲಂಘಿಸಿದೆ . ವಿದ್ಯಾರ್ಥಿಗಳ ಭವಿಷ್ಯಕ್ಕೂ ಇದರಿಂದ ಸಮಸ್ಯೆ ಅಗಲಿದ್ದು, ಹೀಗಾಗಿ ಸರ್ಕಾರ ನಿರ್ಧಾರವನ್ನು ರದ್ದುಪಡಿಸಬೇಕು. ಸಚಿವರ ಹೇಳಿಕೆಗಳ ಜಾರಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.



