ಪದವೀಧರ ಕ್ಷೇತ್ರದ ಚುನಾವಣೆ: ಮಂಡ್ಯದಲ್ಲಿ ಉತ್ಸಾಹದಿಂದ ಮತಚಲಾಯಿಸಿದ ಮತದಾರರು

ಹೊಸದಿಗಂತ ವರದಿ, ಮಂಡ್ಯ:
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಮತದಾನ ಬಿರುಸಿನಿಂದ ಸಾಗಿದ್ದು ಬೆಳಗ್ಗೆ 10 ಗಂಟೆಗೆ 7.4 9ರಷ್ಟು ಮತದಾನವಾದರೆ, 12ಗಂಟೆ ವೇಳೆಗೆ ಶೇ. 21ರಷ್ಟು ಮತದಾನ ನಡೆಯಿತು. ಬೆಳಗ್ಗೆಯಿಂದಲೇ ಉತ್ಸಾಹದಿಂದ ಚಲಾಯಿಸುತ್ತಿದ್ದು ಕಂಡುಬಂತು. ಅದರಲ್ಲೂ ವಿಶೇಷವಾಗಿ ಮಹಿಳೆಯರೇ ಉತ್ಸಾಹದಿಂದ ಪಾಲ್ಗೊಂಡಿದ್ದು ಕಂಡುಬಂತು.
ಮಂಡ್ಯ ವಿಶ್ವವಿದ್ಯಾನಿಲಯದ ಅವರಣದಲ್ಲಿ ಮತದಾನಕ್ಕೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಮತ ಕೇಂದ್ರದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮತ ಕೇಂದ್ರದ ಆವ‌ರಣದೂಳಗೆ ಬರಲು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದ್ದು ನಿಲ್ದಾಣ ವ್ಯವಸ್ಥೆ ಮಾಡಲಾಗಿತ್ತು.
ಜೆಡಿಎಸ್ ಕಾಂಗ್ರೆಸ್, ಬಿಜೆಪಿ ಮತ್ತು ರೈತ ಸಂಘದ ಕಾರ್ಯಕರ್ತರು ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಿದ್ದು ಕಂಡುಬಂತು. ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ವಿಶ್ವ ವಿಶ್ವವಿದ್ಯಾಲಯ ಮುಂಭಾಗದ ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ಶಾಮಿಯಾನ ಶಾಮಿಯನ್ ಹಾಕಿಕೊಂಡು ಮತದಾರರು ಬರುತ್ತಿದ್ದಂತೆ ಕೈಮುಗಿದು ತಮ್ಮ ಅಭ್ಯರ್ಥಿಗಳ ಪರವಾಗಿ ಮತ ಕೇಳುತ್ತಿದ್ದುದು ವಿಶೇಷವಾಗಿತ್ತು.
ಮಧ್ಯಾಹ್ನವಾಗುತ್ತಿದ್ದಂತೆ ಮತದಾನ ಮತ್ತಷ್ಟು ಚುರುಕು ಪಡೆದುಕೂಂಡಿತು. ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!