ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ: ಸಚಿವರಿಂದ ತಾತ್ಕಾಲಿಕ ಆಯ್ಕೆ ಪಟ್ಟಿ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರಕಾರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಗಾಗಿ ಕಾಯುತ್ತಿರುವ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದೆ. ಸಮಗ್ರ ಶಿಕ್ಷಣ ಕಚೇರಿಯಲ್ಲಿ ಸಚಿವ ಬಿ.ಸಿ.ನಾಗೇಶ್‌ ) ಅವರು ಶುಕ್ರವಾರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ತಾತ್ಕಾಲಿಕ ಆಯ್ಕೆ ಪಟ್ಟಿ ‌ಪ್ರಕಟ ಮಾಡಿದ್ದೇವೆ. 1:1 ಆಧಾರದಲ್ಲಿ ಪಟ್ಟಿ ರಿಲೀಸ್ ಮಾಡಲಾಗಿದೆ. ಎಲ್ಲರ ಆರೋಪಕ್ಕೆ ಇವತ್ತು ಉತ್ತರ ನೀಡಿದ್ದೇವೆ. ಅತ್ಯುತ್ತಮವಾಗಿ ಪರೀಕ್ಷೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

15 ಸಾವಿರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ಮಾಡಿದ್ದೆವು. 13,363 ಜನ 1:1 ಆಧಾರದಲ್ಲಿ ಅಭ್ಯರ್ಥಿಗಳು ಪಟ್ಟಿಯಲ್ಲಿ ಇದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ 5 ಸಾವಿರ ಹುದ್ದೆ ಇಟ್ಟಿದ್ದೇವೆ. 5 ಸಾವಿರ ಹುದ್ದೆ ಪೈಕಿ 4,187 ಪಟ್ಟಿ ರಿಲೀಸ್ ಆಗಿದೆ (ಕಲ್ಯಾಣ ಕರ್ನಾಟಕ). ಉಳಿದ ಭಾಗದಲ್ಲಿ 9,176 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

1,768 ಇಂಗ್ಲಿಷ್‌ ಅಭ್ಯರ್ಥಿಗಳು ಆಯ್ಕೆ ಆಗಿದೆ. ಗಣಿತ – 5,450 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಸಮಾಜ ವಿಜ್ಞಾನ- 4,521 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಜೀವ ವಿಜ್ಞಾನ- 1,624 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಒಟ್ಟು 15 ಸಾವಿರ ಪೋಸ್ಟ್‌ನಲ್ಲಿ 13,363 ಹುದ್ದೆಗೆ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ ಎಂದು ಹೇಳಿದ್ದಾರೆ.

3 ಜನ ತೃತೀತ ಲಿಂಗಿಗಳು ಶಿಕ್ಷಕರಾಗಿ ಆಯ್ಕೆ ಆಗಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗಳು ಆಯ್ಕೆ ಆಗಿದ್ದಾರೆ. 10 ಜನ ಪರೀಕ್ಷೆ ಬರೆದಿದ್ದರು. ಅದರಲ್ಲಿ 3 ಜನ ಆಯ್ಕೆ ಆಗಿದ್ದಾರೆ. 34 ಜನ ಎಂಜಿನಿಯರ್ ಅಭ್ಯರ್ಥಿಗಳ ಪೈಕಿ 19 ಜನ ಎಂಜಿನಿಯರಿಂಗ್ ಅಭ್ಯರ್ಥಿಗಳು ಶಿಕ್ಷಕರಾಗಿ ಆಯ್ಕೆ ಆಗಿದ್ದಾರೆ. 8 ತಿಂಗಳಲ್ಲಿ ನೇಮಕಾತಿ ‌ಪ್ರಕ್ರಿಯೆ ಯಶಸ್ವಿಯಾಗಿ ಮಾಡಿದ್ದೇವೆ. ಫೆಬ್ರವರಿಯಲ್ಲಿ 2,500 ಹೈಸ್ಕೂಲ್ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮಾಡ್ತೀವಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!