ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ನೇ ತರಗತಿಗಳ) ಹುದ್ದೆಗೆ ಆಯ್ಕೆಯಾಗಿರುವ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹಾಗೂ ಬೆಂಗಳೂರು ಉತ್ತರ, ದಕ್ಷಿಣ ಜಿಲ್ಲೆಗಳ ಅಭ್ಯರ್ಥಿಗಳಿಗೆ ನವೆಂಬರ್ 4ರಂದು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ.
ಅಭ್ಯರ್ಥಿಗಳು ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿ ಎಲ್ಲ ಅಗತ್ಯ ವಿವರಗಳನ್ನು ಪಡೆದುಕೊಂಡು ಭಾವಚಿತ್ರ ಇರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧ ಪಟ್ಟ ದಾಖಲೆಗಳೊಂದಿಗೆ ಕಡ್ಡಾಯವಾಗಿ ಕೌನ್ಸೆಲಿಂಗ್‌ಗೆ ಹಾಜರಾಗಬಹುದು.