ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಂಡ್ಯದ ಬಿ ಜಿ ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿರುವ ಬಿಜಿಎಸ್ ಆಡಿಟೋರಿಯಂ ನಲ್ಲಿ ಪದವಿ ಪ್ರದಾನ ಸಮಾರಂಭ ನಡೆಯಿತು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು.


ಸಮಾರಂಭದಲ್ಲಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಡಾ. ಕೆ ಸುಧಾಕರ್ ಅವರು, ನಾರಾಯಣಗೌಡ , ಕೆ ಗೋಪಾಲಯ್ಯ, ಶಾಸಕ ಸುರೇಶ್ ಗೌಡ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ ಕೆ ರಮೇಶ್, ಆದಿಚುಂಚನಗಿರಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ ಎ ಶೇಖರ್, ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲಡಾ. ಎಂ ಜಿ ಶಿವರಾಮ, ವಿದ್ಯಾರ್ಥಿಗಳು ಪೋಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿಗಳು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸಚಿವರುಗಳ ಸಮ್ಮುಖದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!