ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ಮತ್ತೊಬ್ಬ ಸದಸ್ಯನ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತುರವೆಕೆರೆ ತಾಲೂಕಿನ ದಬ್ಬೇಘಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಜಿ.ಎಸ್.ಸುಧಾ, ಗ್ರಾಮ ಪಂಚಾಯಿತಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ್ ಅವರ ಶರ್ಟ್ ಹರಿದು ಹಾಕಿ, ನನಗೆ ಮತ ಹಾಕಿಲ್ಲ ಹಾಗಾಗಿ ನಾನು ಸೋತಿದ್ದೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಅವರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಕೂಡ ನಿಂದಿಸಿದ್ದಾರೆ
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸುಧಾ ವಿರುದ್ಧ ಸ್ಪರ್ಧಿಸಿದ್ದ ಛಾಯಾಮಣಿ ಗೆಲುವು ಸಾಧಿಸಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ಸೋಲಿನ ಹತಾಶೆಗೆ ಪಂಚಾಯತ್ ಸದಸ್ಯೆ ರಂಪಾಟ ಮಾಡಿಕೊಂಡಿದ್ದಾರೆ.